ರಾಜಕೀಯ ಗುರು ಎಸ್‌ಎಂ ಕೃಷ್ಣ ಪಾರ್ಥೀವ ಶರೀರ ಮುಂದೆ ಕಣ್ಣೀರು ಹಾಕಿದ ಡಿಕೆಶಿ!

Dec 10, 2024, 12:47 PM IST

ಬೆಂಗಳೂರು(ಡಿ.10) ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ನಿಧನ ವಾರ್ತೆ ತಿಳಿಯುತ್ತಿದ್ದಂತೆ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂತಿಮ ದರ್ಶನ ಪಡೆದಿದ್ದಾರೆ. ತಮ್ಮ ರಾಜಕೀಯ ಗುರು ಎಸ್ಎಂಸ್ ಕೃಷ್ಣ ಪಾರ್ಥೀವ ಶರೀರ ಮುಂದೆ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ನೋವು ತಡೆಯಲಾಗದೆ ಡಿಕೆಶಿ ಕಣ್ಣೀರಿಟ್ಟಿದ್ದಾರೆ.