Jun 6, 2020, 4:35 PM IST
ಬಳ್ಳಾರಿ (ಜೂ. 06): ಯಾವುದೇ ಕಾರಣಕ್ಕೂ ಸದ್ಯ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ. ಕೇವಲ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆ ಪೋಷಕರ ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಸುವರ್ಣ ನ್ಯೂಸ್‌ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಶಾಲೆಗಳ ಆರಂಭ ಯಾವಾಗ? ಲೈವ್ ಬಂದು ವಿವರ ನೀಡಿದ ಸುರೇಶ್ ಕುಮಾರ್
ಆನ್‌ಲೈನ್ ಕ್ಲಾಸ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಆನ್‌ಲೈನ್ ಶಿಕ್ಷಣ ಒಂದು ಗೀಳು. ಇದು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬುದು ಸಾರ್ವತ್ರಿಕ ಅಭಿಪ್ರಾಯ. ಬಹುತೇಕ ಜನರು ಮಕ್ಕಳನ್ನು ಶಾಲೆಗೆ ಕಳಿಸಲು ಸಿದ್ದರಿಲ್ಲ. LKG, UKG ಮಕ್ಕಳು ಆಟ ಆಡಬೇಕೇ ಹೊರತು, ಮೊಬೈಲ್, ಲ್ಯಾಪ್‌ಟಾಪ್ ಮುಂದೆ ಕೂಡಬಾರದು. ಯಾವುದೇ ಕಾರಣಕ್ಕೂ ಈ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಸದ್ಯಕ್ಕೆ ಬೇಡ ಎನ್ನುವ ಅಭಿಪ್ರಾಯ ಹೆಚ್ಚಾಗಿದೆ. ಯಾವ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಕೊಡಬೇಕೆಂದು ಸೋಮವಾರ ತೀರ್ಮಾನ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.