Jan 26, 2022, 5:35 PM IST
ಬೆಂಗಳೂರು (ಜ. 26): ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಲ್ಲದೆ, ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದೂ ಹೇಳಿದ್ದಾರೆ.
'ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದವರಿಗೆ ಸ್ವಾಗತ. ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೇನೆಂದು ಎಲ್ಲಿ ಹೇಳಿದ್ದೇನೆ.? ನಾನು ಯಾವ ಶಾಸಕರೊಂದಿಗೂ ಮಾತಾಡಿಲ್ಲ. ಅವರೇ ನನ್ನ ಬಳಿ ಮಾತನಾಡಿದ್ದಾರೆ. ಬಿಜೆಪಿ ಸವಾಲುಗಳಿಗೆಲ್ಲಾ ಉತ್ತರ ಕೊಡಲ್ಲ ರೀ' ಎಂದು ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.