Hijab Row ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಪ್ರತಿಧ್ವನಿಸಿದ ಹಿಜಾಬ್

Feb 4, 2022, 8:40 PM IST

ಮೈಸೂರು, (ಫೆ.04): ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. 

Hijab Row ಹಿಜಾಬ್ ವಿವಾದ, ಮಹತ್ವದ ಸೂಚನೆ ಕೊಟ್ಟ ಕರ್ನಾಟಕ ಶಿಕ್ಷಣ ಇಲಾಖೆ

ಇದರಿಂದಾಗಿ ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್​ ವಿವಾದ(Hijab controversy) ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ಕಾಲೇಜುಗಳಲ್ಲೂ ಆರಂಭವಾಗಿದೆ.