MLC Elections:  ರೇವಣ್ಣ 2 ನೇ ಪುತ್ರ ಅಖಾಡಕ್ಕೆ,  JDS ಅಲ್ಲ 'JDF' ಎಂದು ಸಿದ್ದು ಲೇವಡಿ!

MLC Elections: ರೇವಣ್ಣ 2 ನೇ ಪುತ್ರ ಅಖಾಡಕ್ಕೆ, JDS ಅಲ್ಲ 'JDF' ಎಂದು ಸಿದ್ದು ಲೇವಡಿ!

Published : Nov 22, 2021, 01:32 PM ISTUpdated : Nov 22, 2021, 01:39 PM IST

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ ಕಣಕ್ಕಿಳಿದಿದ್ದಾರೆ. 

ಬೆಂಗಳೂರು (ನ. 21): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ (HD Devegowda) ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ  (Sooraj Revanna) ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಾಸನದಿಂದ  (Hassan) ಕಣಕ್ಕಿಳಿದಿದ್ದಾರೆ. ಇದರೊಂದಿಗೆ ದೇವೇಗೌಡರ ಕುಟುಂಬದ 8ನೇ ವ್ಯಕ್ತಿ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ. ಅಲ್ಲದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬದ ಎಲ್ಲರೂ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ.

ಮಾಜಿ ಪ್ರಧಾನಿ ದೇವೇಗೌಡರು ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ (Politics)  ಸಕ್ರಿಯರಾಗಿದ್ದಾರೆ. ಅವರ ಪುತ್ರರೂ ರಾಜಕೀಯ ಕಣದಲ್ಲಿದ್ದಾರೆ. ಎಚ್‌.ಡಿ.ರೇವಣ್ಣ ರಾಜಕೀಯದಲ್ಲಿದ್ದಾರೆ. ಇನ್ನು ಅವರ ಪತ್ನಿ ಭವಾನಿ ರೇವಣ್ಣ ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿದ್ದರು. ಎರಡನೇ ಪುತ್ರ ಪ್ರಜ್ವಲ್‌ ರೇವಣ್ಣ ಹಾಸನದಿಂದ ಸಂಸದರಾಗಿದ್ದರೆ, ಈಗ ಸೂರಜ್‌ ವಿಧಾನ ಪರಿಷತ್‌ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. 

ಗೌಡರ ಕುಟುಂಬ ರಾಜಕಾರಣಕ್ಕೆ ಇತರ ರಾಜಕೀಯ ನಾಯಕರು ವ್ಯಂಗ್ಯವಾಡಿದ್ದಾರೆ. 'ಇಡೀ ದೇಶದಲ್ಲಿ ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿರುವ ಏಕೈಕ ಕುಟುಂಬವೆಂದರೆ ಅದುವೇ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ' ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಛೇಡಿಸಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!