ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ' ಈ ರೀತಿ ಆಗಬಾರದಿತ್ತು. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಬಂದೆವು. ಅವರ ಕುಟುಂಬದ ಜೊತೆ ಸರ್ಕಾರ ಇದೆ' ಎಂದಿದ್ದಾರೆ.
ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ' ಈ ರೀತಿ ಆಗಬಾರದಿತ್ತು. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಬಂದೆವು. ಅವರ ಕುಟುಂಬದ ಜೊತೆ ಸರ್ಕಾರ ಇದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ' ಎಂದು ನಾರಾಯಣ ಗೌಡ ಭೇಟಿ ಬಳಿಕ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ.