ಗಂಭೀರ ರೋಗ ಲಕ್ಷಣಗಳಿಲ್ಲದಿದ್ರೆ ಆಸ್ಪತ್ರೆ ದಾಖಲಾತಿ ಬೇಡ: ಡಾ. ಸುಧಾಕರ್

Apr 16, 2021, 1:37 PM IST

ಬೆಂಗಳೂರು (ಏ. 16): ಕೋವಿಡ್-19 ಎರಡನೇ ಅಲೆ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಡೆಸಲಾಯಿತು. ಸೋಂಕಿತರ ಚಿಕಿತ್ಸೆಗೆ ಅಂಬ್ಯುಲೆನ್ಸ್ ಮತ್ತು ಹಾಸಿಗೆಗಳ ಲಭ್ಯತೆ, ಔಷಧ ಮತ್ತು ಆಕ್ಸಿಜನ್ ಪೂರೈಕೆ ಸೇರಿದಂತೆ ಅನೇಕ ಕ್ರಮಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಯಿತು.

ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

'ಖಾಸಗಿ ಆಸ್ಪತ್ರೆಗಳು 50% ಬೆಡ್ ಮೀಸಲಿಡುವುದು ಕಡ್ಡಾಯವಾಗಿದ್ದು, ಮೇಲ್ವಿಚಾರಣೆಗೆ ಪ್ರತಿಯೊಂದು ಆಸ್ಪತ್ರೆಗೂ ಒಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಭಾನುವಾರ ಸರ್ವಪಕ್ಷ ಸಭೆ ಕರೆದಿದ್ದು ಸಭೆಯಲ್ಲಿ ಎಲ್ಲ ನಾಯಕರ ಅಭಿಪ್ರಾಯ ಪಡೆದು ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ಧಾರೆ.