Jan 26, 2022, 5:57 PM IST
ಬೆಂಗಳೂರು (ಜ. 26): ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಲ್ಲದೆ, ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದೂ ಹೇಳಿದ್ದಾರೆ.
'ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳಲ್ಲ, ನಾನೆಲ್ರಿ ಹಾಗಂದೆ.'? ಸಿದ್ದರಾಮಯ್ಯ
'ಮೊದಲು ಸಂಪರ್ಕದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಿ. ಸಂಪರ್ಕದಲ್ಲಿದ್ದಾರೆ ಎಂದ ಮಾತ್ರಕ್ಕೆ ಅವರ ಪಕ್ಷಕ್ಕೆ ಹೋಗುತ್ತಾರೆ ಎಂಬುದೆಲ್ಲಾ ಸುಳ್ಳು. ವಿಶ್ವಾಸ ಬೇರೆ, ಹೋಗೋದು ಬೇರೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.