ಬೆಂಗಳೂರಿನಲ್ಲಿ ರೈತ ಸಂಘಟನೆಗಳ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ಭೀತಿಯನ್ನೂ ಲೆಕ್ಕಿಸದೇ ರೈತರು ಬೀದಿಗಿಳಿದಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.
ಬೆಂಗಳೂರು (ಸೆ. 23): ಸಿಲಿಕಾನ್ ಸಿಟಿಯಲ್ಲಿ ರೈತ ಸಂಘಟನೆಗಳ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ಭೀತಿಯನ್ನೂ ಲೆಕ್ಕಿಸದೇ ರೈತರು ಬೀದಿಗಿಳಿದಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಮೌರ್ಯ ಸರ್ಕಲ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸುಗ್ರೀವಾಜ್ಞೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.