Dec 4, 2020, 11:29 AM IST
ಬೆಂಗಳೂರು (ಡಿ. 04): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ಪ್ರಕಟಿಸಲಿದೆ.
ಅರ್ಜಿಯ ವಿಚಾರಣೆಯನ್ನು ನ.25ರಂದು ಪೂರ್ಣಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿಅವರ ವಿಭಾಗೀಯ ನ್ಯಾಯಪೀಠ ಇಂದು ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸಲಿದೆ.