ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಿದ ಕನ್ನಡ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು!

Aug 28, 2020, 4:52 PM IST

ಬೆಳಗಾವಿ (ಆ. 28):  ಪೀರಣವಾಡಿ ನಾಕಾ ಬಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅನುಮತಿ ಇಲ್ಲದೇ ಕಾನೂನು ಬಾಹಿರವಾಗಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ ಎಂದು 20 ಜನರ  ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರರು, ಸಂಗೊಳ್ಳಿ ರಾಯಣ್ಣ ವಿರುದ್ಧ ಕೇಸ್ ದಾಖಲಾಗಿದೆ. 

ಸಂಗೊಳ್ಳಿ ರಾಯಣ್ಣ ಹುಟ್ಟಿ, ಬೆಳೆದ, ಆಳಿದ ನಾಡು ಬೆಳಗಾವಿ. ಆ ಮಹಾನ್ ವ್ಯಕ್ತಿಯ ಪ್ರತಿಮೆ ಸ್ಥಾಪಿಸಲು ಅನುಮತಿ ಯಾಕೆ ಎಂದು ಕನ್ನಡ ಪರ ಹೋರಾಟಗಾರರು, ರಾಯಣ್ಣ ಅಭಿಮಾನಿ ಬಳಗದವರು ಅನುಮತಿ ಪಡೆಯದೇ ಪ್ರತಿಮೆ ಸ್ಥಾಪನೆ ಮಾಡಲು ಮುಂದಾಗಿದ್ದೇ ಈ ಪ್ರತಿಭಟನೆಗೆ ಕಾರಣವಾಯ್ತು. ಅಂತವರ ವಿರುದ್ಧ ಈಗ ಎಫ್‌ಐಆರ್ ದಾಖಲಾಗಿದೆ. 

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೂಚನೆ: ಬೊಮ್ಮಾಯಿ