Jun 30, 2020, 2:12 PM IST
ಬೆಂಗಳೂರು(ಜೂ.30): ಕೊರೋನಾ ಹರಡದಂತೆ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ನಿಯಮವನ್ನು ಜಾರಿಗೆ ತಂದಿತ್ತು. ಹೀಗಿದ್ದು ಕ್ವಾರಂಟೈನ್ ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಸರ್ಕಾರದ ಸೂಚನೆಯ ಮೇರೆಗೆ ಅಧಿಕಾರಿಗಳು ಶಿಸ್ತುಕ್ರಮಕ್ಕೆ ಮುಂದಾಗಿದ್ದು, ಹೋಮ್ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯದಲ್ಲಿ ಒಂದು ಲಕ್ಷದ ಹದಿಮೂರು ಸಾವಿರ ಮಂದಿ ಹೋಮ್ ಕ್ವಾರಂಟೈನ್‌ನಲ್ಲಿದ್ದರು. ಈ ಪೈಕಿ 7693 ಮಂದಿಯ ವಿರುದ್ಧ ಶಿಸ್ತು ಕ್ರಮ ಜಾರಿಯಾಗಲಿದೆ.
ಮುಖ್ಯಮಂತ್ರಿಗಳೇ ಗಮನಿಸಿ: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!
ಹಲವರಿಗೆ ಎಚ್ಚರಿಗೆ ನೀಡಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇದರ ಹೊರತಾಗಿಯೂ ಮತ್ತೆ ನಿಯಮ ಉಲ್ಲಂಘಿಸಿದ 379 ಮಂದಿಯ ವಿರುದ್ಧ FIR ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲೇ ಅತಿಹೆಚ್ಚು ಕ್ವಾರಂಟೈನ್ ನಿಯಮ ಉಲ್ಲಂಘನೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.