ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು, ಇದಕ್ಕೆಲ್ಲಾ ಬಗ್ಗಲ್ಲ, ಜಗ್ಗಲ್ಲ, ನೋ ರಿಸೈನ್ ಎಂದ ಈಶ್ವರಪ್ಪ!

Feb 18, 2022, 5:25 PM IST

ಬೆಂಗಳೂರು (ಫೆ. 18): ನವದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವ ಮೂಲಕ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ, ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಹಾಗೂ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂಬ ಬೇಡಿಕೆಯೊಂದಿಗೆ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ. 

ರಾಷ್ಟ್ರಧ್ವಜ ಅವಮಾನಿಸಿ ದೇಶದ್ರೋಹ ಹೇಳಿಕೆ ನೀಡಿರುವ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ರಾಜ್ಯಪಾಲರು ಕೂಡಲೇ ವಜಾಗೊಳಿಸಬೇಕು. ಸರ್ಕಾರವು ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒತ್ತಾಯಿಸಿದ್ದಾರೆ. ನನ್ನ ಬಗ್ಗೆ ಮಾತ್ರವಲ್ಲದೆ ನಮ್ಮ ತಂದೆಯವರ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆತ ಮೊದಲು ಸಚಿವ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದು ಡಿಕೆಶಿವಕುಮಾರ್‌ ಆಗ್ರಹಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷದವರು ಜೀವನ ಪರ್ಯಂತ ಧರಣಿ ಮಾಡಿದರೂ ನಾನು ಕುಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ಸದನದಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಜಟಾಪಟಿ, ವಾಕ್ಸಮರ ಹೀಗಿತ್ತು ನೋಡಿ. 


Flag Row: KS Eshwarappa and DK Shivakumar Almost Blows over Saffron Flag hls