ಜೂನ್, ಜುಲೈ ಆಯ್ತು, ಈಗ ಆಗಸ್ಟ್‌ಗೆ ಮುಂದೂಡಿಕೆಯಾದ ಅನ್ನಭಾಗ್ಯ ಯೋಜನೆ

ಜೂನ್, ಜುಲೈ ಆಯ್ತು, ಈಗ ಆಗಸ್ಟ್‌ಗೆ ಮುಂದೂಡಿಕೆಯಾದ ಅನ್ನಭಾಗ್ಯ ಯೋಜನೆ

Published : Jun 22, 2023, 04:42 PM IST

ಜುಲೈ 1 ರಿಂದ ಅಕ್ಕಿ ಕೊಡೊಲ್ಲ. ಆದರೆ, ಆಗಸ್ಟ್ 1 ನೇ ತಾರೀಖಿಗಿಂತ ಮುಂಚಿತವಾಗೇ ಅಕ್ಕಿ‌ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. 

ಬೆಂಗಳೂರು (ಜೂ.22): ರಾಜ್ಯದಲ್ಲಿ ಇನ್ನೂ ಅಕ್ಕಿ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಆದ್ದರಿಂದ ಜುಲೈ 1 ರಿಂದ ಅಕ್ಕಿ ಕೊಡೊಲ್ಲ. ಆದರೆ, ಆಗಸ್ಟ್ 1 ನೇ ತಾರೀಖಿಗಿಂತ ಮುಂಚಿತವಾಗೇ ಅಕ್ಕಿ‌ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. 

ಈ ಕುರಿತು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಮೂಲಗಳಿಂದ ಅಕ್ಕಿ ಖರೀದಿಸುವ ಪ್ರಯತ್ನಗಳು ಮುಂದುವರಿದಿದೆ. NCCF, ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಖರೀದಿ ಪ್ರಕ್ರಿಯೆ ನಡೆಯಿತ್ತಿದೆ. ನಮಗೆ ಟ್ರಾನ್ಸ್‌ಪೋರ್ಟ್‌ ಚಾರ್ಜ್‌ ಕೂಡ ಹೆಚ್ಚಾಗಲಿದೆ. ಇದೆಲ್ಲಾ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ. ಅಕ್ಕಿ ನೀಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ನಾವು ದೆಹಲಿಗೆ ತೆರಳಿದ್ದೆವು. ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಭೇಟಿಗೆ ತೆರಳಿದ್ದೆನು. ಮೂರ್ನಾಲ್ಕು‌ ದಿನಗಳ ಕಾಲ ಭೇಟಿಗೆ ಪ್ರಯತ್ನಿಸಿದೆ. ಆದರೂ ಭೇಟಿಗೆ ಅವಕಾಶ ಕೊಡಲೇ ಇಲ್ಲ. ಬಡವರಿಗೆ ನೀಡುವ ಅಕ್ಕಿ ವಿಚಾರದಲ್ಲೂ ಕೇಂದ್ರ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more