Dec 10, 2024, 5:39 PM IST
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಸರ್ಕಾರವು ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.ಅವರು ತಮ್ಮ ಹುಟ್ಟೂರಿನ ಸೋಮನಹಳ್ಳಿಯ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ್ದರು. ತಮ್ಮ ಅಂತಿಮ ದಿನಗಳಲ್ಲಿಯೂ ತಮ್ಮ ಹುಟ್ಟೂರಿನ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದ್ದರು. ಎಸ್ಎಂ ಕೃಷ್ಣ ಅವರು ಕೆಲವೇ ದಿನಗಳ ಹಿಂದೆ ಅಷ್ಟೇ ತಮ್ಮೂರಿನ ಸೋಮನಹಳ್ಳಿಯಲ್ಲಿನ ಆಂಜನೇಯಸ್ವಾಮಿ, ಮಾರಮ್ಮ, ಬೋರೆದೇವೇರ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿಸಿದ್ದರು.