Jul 2, 2021, 10:53 AM IST
ಬೆಂಗಳೂರು (ಜು. 02): ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಮುಖ್ಯಮಂತ್ರಿಗಳ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರಿನಲ್ಲಿ ಜನರಿಂದ ಕೋಟ್ಯಂತರ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಆಪ್ತ ಸಹಾಯಕನನ್ನು ಬೆಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಭಾರೀ ವಂಚನೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಪಿಎ ಅರೆಸ್ಟ್!
ಸಿಸಿಬಿ ಪೊಲೀಸರು ಬಂಧಿಸಲು ತೆರಳಿದ್ದಾಗ, ರಾಜಣ್ಣ ಹೈಡ್ರಾಮಾ ಮಾಡಿದ್ದಾರೆ. ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿ, ನಾನು ಯಾರು ನಿಮ್ಗೆ ಗೊತ್ತಿಲ್ಲ, ನಿಮ್ಮನ್ನೆಲ್ಲಾ ಎತ್ತಂಗಡಿ ಮಾಡಿಸ್ತಿನಿ ಎಂದು ಅವಾಜ್ ಹಾಕಿದ್ದಾರೆ.