ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಬೆಂಗಳೂರು (ಜ. 22): ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
'ಮೇಕೆದಾಟು, ಕಳಸಾ ಬಂಡೂರಿ ಯಾವ ರೀತಿ ಬಗೆಹರಿಸಿಕೊಳ್ಳಬೇಕು ಎಂದು ದೆಹಲಿ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸಿದ್ದೇವೆ. ಕೋವಿಡ್ ಇರುವುದರಿಂದ ವರ್ಚುವಲ್ ಸಭೆ ನಡೆಸಿದ್ದೇವೆ. ಆದಷ್ಟು ಶೀಫ್ರದಲ್ಲಿ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಸರ್ಕಾರದ ಅಡ್ವೋಕೇಟ್ ಜನರಲ್, ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ಅಂತಾರಾಜ್ಯ ಜಲ ವಿವಾದಗಳ ಪ್ರಕರಣಗಳನ್ನು ನಿಭಾಯಿಸುವ ಹಲವು ಹಿರಿಯ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ.