ಪ್ರತಿಭಟನೆ ಕೈಬಿಡದಿದ್ರೆ ಸಾರಿಗೆ ನೌಕರರಿಗೆ ಪಾಠ ಕಲಿಸಲು ಸರ್ಕಾರ ಮಾಸ್ಟರ್ ಪ್ಲಾನ್!

Dec 12, 2020, 1:22 PM IST

ಬೆಂಗಳೂರು (ಡಿ. 12): ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ನೌಕರರು ಪ್ರತಿಭಟನೆಯನ್ನು ವಾಪಸ್ ಪಡೆಯದಿದ್ರೆ ಖಾಸಗಿ ಬಸ್‌ಗಳನ್ನು ರಸ್ತೆಗಿಳಿಸಲು ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಜೊತೆ ನಡೆದ ಸಭೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಬಸ್ಸಿಲ್ಲದಿದ್ರೆ ಏನಾಯ್ತು? ನಾವಿದ್ದೀವಲ್ಲ ಎಂದ ನಮ್ಮ ಮೆಟ್ರೋ; ಪ್ರಯಾಣಿಕರಿಗಾಗಿ ಹೆಚ್ಚುವರಿ ಸಂಚಾರ

ಖಾಸಗಿ ಬಸ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ಧಾರೆ. ಕೋವಿಡ್‌ನಿಂದ ಶಿಕ್ಷಣ ಸಂಸ್ಥೆಗಳ ಬಸ್‌ಗಳು ಸುಮ್ಮನೆ ನಿಂತಿವೆ. ಕೆಲವು ಸಂಸ್ಥೆಗಳ ಬಸ್‌ಗಳು ಕಾರ್ಯ ನಿರ್ವಹಿಸುತ್ತಿಲ್ಲ. ಇವುಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆದು ಸಾರ್ವಜನಿಕ ಸೇವೆಗೆ ಬಿಡುವ ಬಗ್ಗೆ ಚರ್ಚಿಸಲಾಗಿದೆ. ಟಿಕೆಟ್ ಹಣ ಸಂಗ್ರಹವನ್ನು ಖಾಸಗಿ ಬಸ್‌ಗಳಿಗೆ ಬಿಡಲಾಗುವುದು.