ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!

ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!

Published : Jul 20, 2023, 12:28 PM IST

ಮನೆ ಮನೆ ಮಹಾಲಕ್ಷ್ಮಿಯರಿಗೆ.. ಗೃಹಲಕ್ಷ್ಮಿ ಗ್ಯಾರಂಟಿ..!
ಪ್ರತಿ ತಿಂಗಳೂ 2 ಸಾವಿರ.. ಅರ್ಜಿ ಹಾಕುವುದು ಹೇಗೆ..?
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು..?

ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ(Grilakshmi Scheme) ಅಧಿಕೃತ ಜಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮನೆ ಮನೆ ಮಹಾಲಕ್ಷ್ಮಿಯರು ಫುಲ್ ಖುಷ್ ಆಗಿದ್ದಾರೆ. ಪಂಚ ಗ್ಯಾರಂಟಿಗಳ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್(Congress) ಈಗಾಗಲೇ ಶಕ್ತಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೇ ಅಂತ ಹೇಳಿತ್ತು. ಈ ಬೆನ್ನಲ್ಲೇ ಸ್ವಲ್ಪ ಲೇಟ್ ಆದ್ರು ಲೇಟೆಸ್ಟ್ ಆಗಿ ಮತ್ತೊಂದು ಮಹಾತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅರ್ಜಿ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ರು. ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌(DCM DK Shivakumar) ಹಂಚಿಕೆ ಮಾಡಿದ್ರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಲಾಂಛನ ಮತ್ತು ಪೋಸ್ಟರ್‌ ಅನಾವರಣಗೊಳಿಸಿದ್ರು.

ಇದನ್ನೂ ವೀಕ್ಷಿಸಿ: ತನಿಖೆ ನಡೆಯುತ್ತಿದ್ದು, ಈಗಲೇ ಉಗ್ರರು ಎಂದು ಹೇಳಲಾಗುವುದಿಲ್ಲ: ಡಾ.ಜಿ. ಪರಮೇಶ್ವರ್‌

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!