Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Suvarna News   | Asianet News
Published : Feb 23, 2022, 07:03 PM IST

ಹರ್ಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ
ನಳೀನ್ ಕುಮಾರ್ ಕಟೀಲ್ ಗೆ ಸಾಥ್ ನೀಡಿದ ಈಶ್ವರಪ್ಪ, ವಿಜಯೇಂದ್ರ
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್
 

ಶಿವಮೊಗ್ಗ (ಫೆ.23): ಧರ್ಮದ್ವೇಷಕ್ಕೆ ಬಲಿಯಾಗಿ ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ಹರ್ಷ (Harsha ) ಅವರ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ (BJP State Prez) ನಳೀನ್ ಕುಮಾರ್ ಕಟೀಲ್ (Nalin Kumar Kateel) ಭೇಟಿ ನೀಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹಾಗೂ ವಿಜೇಯೇಂದ್ರ ಸಾಥ್ ನೀಡಿದ್ದರು. ಮೃತ ಹರ್ಷ ಅವರ ನಿವಾಸಕ್ಕೆ ಈಗಾಗಲೇ ಅನೇಕ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್ ಕಟೀಲ್, "ಇಡೀ ಕುಟುಂಬದೊಂದಿಗೆ ಭಾರತೀಯ ಜನತಾ ಪಾರ್ಟಿ ಪಕ್ಷವಿದೆ ಎನ್ನುವುದನ್ನು ತಿಳಿಸಿದ್ದೇವೆ.  ಆಗಿರುವ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ತರಿಸಿಕೊಂಡಿದ್ದೇವೆ. ಪಕ್ಷದ ಕಡೆಯಿಂದ ಈಗ ಮಾತ್ರವಲ್ಲ ಮುಂದಿನ ದಿನಗಳಲ್ಲೂ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ' ಎಂದು ಹೇಳಿದರು.

Manipur Elections: 5 ವರ್ಷ ಅಧಿಕಾರ ಕೊಡಿ, ಯಾವೊಬ್ಬ ಯುವಕನೂ ಶಸ್ತ್ರಾಸ್ತ್ರ ಹಿಡಿಯುವುದಿಲ್ಲ ಎಂದ ಶಾ!
ಈಗಾಗಲೇ ಇಡೀ ಹಿಂದು ಸಮಾಜ ಅವರೊಂದಿಗೆ ಸ್ಪಂದಿಸಿದೆ. ಸಂಪೂರ್ಣವಾದ ತನಿಖೆಯನ್ನು ನಮ್ಮ ಸರ್ಕಾರ ಮಾಡಲಿದೆ. ಯಾವುದೇ ಶಕ್ತಿಗಳು ಇದರ ಹಿಂದಿದ್ದರೂ, ಅವರನ್ನು ಮಟ್ಟ ಹಾಕದೇ ಬಿಡುವುದಿಲ್ಲ. ಈಗಾಗಲೇ ಕೆಲವರ ಬಂಧನವಾಗಿದೆ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯನ್ನು ನೀಡುವ ಕೆಲಸವನ್ನೂ ಸರ್ಕಾರ ಮಾಡಲಿದೆ' ಎಂದು ಹೇಳಿದರು.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more