ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

Published : Nov 04, 2023, 08:40 PM IST

ಹಾಸನಾಂಬ ದೇವರ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಸಮೇತ ಪೂಜೆಯಲ್ಲಿ ಭಾಗಿಯಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.

ಹಾಸನ (ನ.04): ಹಾಸನಾಂಬ ದೇವಿಯ ಉತ್ಸವ ಹಾಗೂ ಕಳಸ ಪ್ರತಿಷ್ಠಾಪನೆಯಲ್ಲಿ ಹಾಸನದ ಶಾಸಕ ಸ್ವರೂಪ್‌ ಪ್ರಕಾಶ್‌ ಅವರು ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜಿಲ್ಲಾಧಿಕಾರಿನೇ ಅಧ್ಯಕ್ಷೆ, ಉಪಾಧ್ಯಕ್ಷರೂ ಆಗಿಬಿಟ್ಟಿದ್ದಾರೆ. ಹಾಸನಾಂಬ ದೇವರ ಪೂಜೆಯಲ್ಲಿ ದಂಪತಿಯಿಂದಿಗೆ ಪೂಜೆಯಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದಾರೆ. ಶಾಸಕರು, ನಗರಸಭೆ ಸದಸ್ಯರು ಹಾಗೂ ಇತರೆ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹೇಳಿದರು. 

ಕುಟುಂಬ ಸಮೇತ ಪೂಜೆಗೆ ಕುಳಿತುಕೊಂಡು ದೇವರಿಗೆ ಅಗೌರವ ತೋರಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮುಜರಾಯಿ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿ ಸತ್ಯಭಾಮಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ. ಸನ್ಮಾನ ಆಗುವಂತಹ ಸಮಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಕೂಡ ಕಡೆಗಣಿಸಿದ್ದಾರೆ. ಇಂದು ಶನಿವಾರ ರಜಾದಿನವಾದ್ದರಿಂದ ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಹಾಸನಾಂಬ ದರ್ಶನಕ್ಕೆ ಬರಬೇಕಿತ್ತು. ಆದರೆ, ಜಿಲ್ಲಾಧಿಕಾರಿಯ ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ. ಸರಿಯಾದ ಸಮಯಕ್ಕೆ ದರ್ಶನ ಸಿಗದೇ ದೇವರ ದರ್ಶನಕ್ಕೆ ಬರುವುದರ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಿದ್ದಾರೆ ಎಂದು ಶಾಸಕ ಸ್ವರೂಪ್‌ ಆಕ್ರೋಶ ವ್ಯಕ್ತಪಡಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more