'ಸಮಾಜದ ಶಾಂತಿಗೆ ಹೋರಾಡಿದ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ'? ಎಂದು ಗುಡುಗಿದ್ದಾರೆ.
ಬೆಂಗಳೂರು (ಜ. 25): ಸಮಾಜದ ಶಾಂತಿಗೆ ಹೋರಾಡಿದ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಗುಡುಗಿದ್ದಾರೆ.
ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.