ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ: HDK
ಬೆಂಗಳೂರು (ಡಿ. 08): ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ' ಎಂದು ಲೇವಡಿ ಮಾಡಿದ್ದಾರೆ.
ಚುನಾವಣೆ ಬಂದರೆ ಜೆಡಿಎಸ್‌ಗೆ ಚಳಿ- ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಹೊಸ ಔಷಧವೇ JDF. ಟಾನಿಕ್ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ ಎಂದು ಸಿದ್ದು ಟೀಕೆಗೆ ಎಚ್‌ಡಿಕೆ ಉತ್ತರ ಕೊಟ್ಟಿದ್ದಾರೆ. ನಮ್ಮದು JDF ಅಂತಾರೆ ಅವರದ್ದು SCF (ಸಿದ್ದರಾಮಯ್ಯ ಕಾಂಗ್ರೆಸ್ ಫ್ಯಾಮಿಲಿ) ಸೂತ್ರ ಅಲ್ವಾ.? ಎಂದಿದ್ದಾರೆ.