Dec 26, 2021, 1:02 PM IST
ಬೆಂಗಳೂರು (ಡಿ. 26): ರಾಜ್ಯಾದ್ಯಂತ ಒಮಿಕ್ರೋನ್ ಪ್ರಕರಣಗಳು (Omicron Variant) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಿಂದ ಕೋವಿಡ್ ನಿಯಮಾವಳಿಗಳನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ತಜ್ಞರು, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ಧಾರೆ.
Omicron Threat: ಕರುನಾಡಿಗೆ ಶಾಕ್ ಮೇಲೆ ಶಾಕ್ ಕೊಡ್ತಿದೆ ಒಮಿಕ್ರೋನ್: ಆತಂಕದಲ್ಲಿ ಜನತೆ
ರಾಜ್ಯಾದ್ಯಂತ ಡಿ 28 ರಿಂದ 10 ದಿನಗಳ ಕಾಲ ಅಂದರೆ ಜ. 06 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ (Night Curfew) ವಿಧಿಸಲಾಗುತ್ತದೆ. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಆಚರಣೆಯನ್ನು ನಿಷೇಧಿಸಲಾಗಿದೆ. ಬಾರ್, ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ಶೇ. 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ' ಎಂದು ಸಭೆಯ ಬಳಿಕ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.