ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

Published : Jul 27, 2023, 09:58 AM IST

ಕರುನಾಡಲ್ಲಿ ವರುಣ ತನ್ನ ಆರ್ಭಟ ಮುಂದುವರಿಸಿದ್ದಾನೆ. ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದ್ರೆ ಇನ್ನೂ ಕೆಲವು ಪ್ರದೇಶಗಳಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ. 
 

ಮಲೆನಾಡಿನಲ್ಲಿ  ಮಳೆಯ ಅಬ್ಬರಕ್ಕೆ ಮನೆಗೋಡೆ ಕುಸಿದಿದೆ. ಮೂಡಿಗೆರೆಯ ಸಾಲುಮರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟ ಚೆನ್ನಾಗಿತ್ತು. ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿರಂತರ ಮಳೆಗೆ(rain) ಚಿಕ್ಕಮಗಳೂರಿನ ಹೊನ್ನಮ್ಮನ ಹಳ್ಳದ ಫಾಲ್ಸ್‌ಗೆ ಜೀವಕಳೆ ಬಂದಿದೆ. ತುಂಬಿ ಹರಿಯುತ್ತಿರುವ ಫಾಲ್ಸ್‌ನಲ್ಲಿ(Falls) ಸೆಲ್ಪಿ, ರಿಲ್ಸ್ ಗೀಳಿಗೆ ಬಿದ್ದ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ಅಲ್ಲದೇ ಯುವಕರ ಹುಚ್ಚಾಟಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಹಾವೇರಿಯಲ್ಲಿ(Haveri) ವರದಾ ನದಿ ಅಪಾಯದ ಮಟ್ಟ ಮಿರಿ ಹರಿಯುತ್ತಿದೆ. ಹಾವೇರಿಯ ಹಾನಗಲ್‌ನ ಬಾಳಂಬಿಡ, ಲಕಮಾಪೂರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು ರೈತರು ಕಂಗಾಲಾಗಿದ್ದಾರೆ. ಇನ್ನು ಮಳೆ ಸಂಬಂಧ ಸಿಎಂ ಸಿದ್ದರಾಮಯ್ಯ(CM Siddaramaiah) ನಿನ್ನೆ ಎಲ್ಲಾ ಜಿಲ್ಲೆಯ ಡಿಸಿಗಳ ಜೊತೆ ಸಭೆ ನಡೆಸಿ ಮಳೆಹಾನಿ ವರದಿ ಪಡೆದರು. ಜುಲೈನಲ್ಲಿ ಶೇ. 37 ರಷ್ಟು ಮಳೆ ಜಾಸ್ತಿಯಾಗಿದೆ.  ಈವರೆಗೂ 38 ಮಂದಿಗೆ ಜೀವ ಹಾನಿಯಾಗಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ರು.

ಇದನ್ನೂ ವೀಕ್ಷಿಸಿ:  ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more