Sep 10, 2020, 5:53 PM IST
ಬೆಂಗಳೂರು (ಸೆ. 10): ಜುಲೈ, ಆಗಸ್ಟ್ ಎರಡು ತಿಂಗಳುಗಳ ಕಾಲ ಧಾರಾಕಾರವಾಗಿ ಸುರಿದು ಸಾಕಪ್ಪಾ ಸಾಕು... ಎನಿಸಿಕೊಂಡು ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಕಳೆದೆರಡು ದಿನಗಳಿಂದ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಆರ್ಭಟಿಸುತ್ತಿದ್ದಾನೆ. ಮಳೆರಾಯನ ಆರ್ಭಟಕ್ಕೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶದ ಮನೆಗಳಿಗೆ, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಮಳೆ ಕಾಟ, ಕಾರ್ಪೋರೇಟರ್‌ಗಳಿಗೆ ಫೋಟೋ ಸೆಷನ್‌ನಲ್ಲಿ ನಲಿದಾಟ!
ಇದರ ನಡುವೆ ಇನ್ನೂ ಎರಡು ದಿನ ನಗರದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರಗಳು ಹೇಗಿದೆ ಎಂದು ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ..