ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ: ಸಿದ್ದು ಸರ್ಕಾರಕ್ಕೆ ಭಾರೀ ಮುಖಭಂಗ!

Dec 21, 2024, 12:54 PM IST

ಬೆಂಗಳೂರು(ಡಿ.21): ಎಫ್​ಐಆರ್ ದಾಖಲಾದ ಒಂದೇ ಗಂಟೆಗೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗಾವಿಯ ಸುವರ್ಣ ಸೌಧದ ಮೆಟ್ಟಿಲ ಮೇಲಿಂದಲೇ ಸಿ.ಟಿ.ರವಿ ಅವರನ್ನ ಪೊಲೀಸರು ಎಳೆದೊಯ್ದಿದ್ದರು. ಇದಾದ ಬಳಿಕ ಸಿ.ಟಿ ರವಿಗೆ ಹೈಕೋರ್ಟ್​ ಬಿಗ್ ರಿಲೀಫ್ ಸಿಕ್ಕಿದ್ದು, ತಕ್ಷಣ ಬಿಡುಗಡೆಗೆ ಆದೇಶಿಸಿದೆ.  ಆರೋಪಿ ಸಿ.ಟಿ ರವಿ ಬಂಧನ ಮತ್ತು ಹಲ್ಲೆ ಮಾಡುವ ಅಗತ್ಯ ಇರಲಿಲ್ಲ’, ಈ ಘಟನೆ ನಡೆದಿರುವುದು ದುರದೃಷ್ಟಕರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. 

ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

ಕಾನೂನು ಪಾಲಿಸಿ ಕ್ರಮ ಕೈಗೊಳ್ಳಬಹುದಿತ್ತು. ತನಿಖೆಗೆ ಸಹಕರಿಸಬೇಕೆಂಬ ಷರತ್ತು ವಿಧಿಸಿ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ. ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. ಹೀಗಾಗಿ ದಾವಣಗೆರೆಯಲ್ಲಿ ಸಿ.ಟಿ ರವಿ ಅವರನ್ನ ಪೊಲೀಸರು ಬಿಡುಗಡೆ ಮಾಡಲಿದ್ದಾರೆ.