Hijab Row : ವಿದ್ಯಾರ್ಥಿಗಳು ಶಾಂತಿ ಸೌಹಾರ್ದತೆ ಕಾಪಾಡಬೇಕು

Feb 8, 2022, 8:16 PM IST

ಬೆಂಗಳೂರು (ಫೆ.8): ರಾಜ್ಯದಲ್ಲಿ ಹಿಜಾಬ್ (Hijab) ಪ್ರಕರಣ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಈ ನಡುವೆ ಹೈಕೋರ್ಟ್ ನಲ್ಲಿ (High Court) ಪ್ರಕರಣದ ವಿಚಾರಣೆ ಆರಂಭವಾಗಿದ್ದು, ಮೊದಲ ದಿನದ ವಿಚಾರಣೆಯಲ್ಲಿ ಎರಡೂ ಕಡೆಯ ವಾದವನ್ನು ಆಲಿಸಿರುವ ಕೋರ್ಟ್, ಕಾನೂನಿನ ಪ್ರಕಾರವೇ ತಾವು ಕಾರ್ಯ ನಿರ್ವಹಿಸುವುದಾಗಿ ಹೇಳಿದೆ. ಇದರ ನಡುವೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (CN Ashwath Narayan), ರಾಜ್ಯ ವಿದ್ಯಾರ್ಥಿಗಳು ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Hijab row : ಸಂವಿಧಾನ ಹೇಳಿದಂತೆ ನಡೆಯುತ್ತೇವೆ, ನಮಗೆ ಸಂವಿಧಾನವೇ ಭಗವದ್ಗೀತೆ ಎಂದ ಹೈಕೋರ್ಟ್!
ಈಗಾಗಲೇ ಬಹಳ ಸ್ಪಷ್ಟವಾಗಿ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಆದರೆ, ಸ್ಥಿತಿ ಗಂಭೀರವಾಗುತ್ತಿರುವ ಲಕ್ಷಣ ತೋರಿದ್ದು, ನ್ಯಾಯಾಲಯದಲ್ಲಿ ಕೂಡ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ಮೂಲಕವೂ ಸ್ಪಷ್ಟತೆ ಪಡೆಯುವ ಪ್ರಯತ್ನ ನಡೆಸಲಾಗುತ್ತಿದೆ. ಅಲ್ಲಿಯವರೆಗೂ ರಾಜ್ಯದ ವಿದ್ಯಾರ್ಥಿಗಳು ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಸಿಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.