Jul 12, 2023, 11:20 AM IST
ಬೆಳಗಾವಿ: ಚಿಕ್ಕೋಡಿಯ ಜೈನ ಮುನಿ ಹತ್ಯೆ(Jain monk murder) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನಾರಾಯಣ ಮಾಳಿ(Narayan Mali) ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಆತನ ಕುಟುಂಬಸ್ಥರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಆತನ ಮನೆಗೆ ಬಿಗಿ ಪೊಲೀಸ್ (Police) ಭದ್ರತೆಯನ್ನು ಒದಗಿಸಲಾಗಿದ್ದು, ಮನೆಯಲ್ಲಿರುವ 30ಕ್ಕೂ ಹೆಚ್ಚು ಜಾನುವಾರುಗಳ ಆರೈಕೆಯನ್ನು ಖಾಕಿ ಪಡೆಯೇ ಮಾಡುತ್ತಿದೆ. ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಪೊಲೀಸರೇ ಮಾಡಿದ್ದಾರೆ.
ಇದನ್ನೂ ವೀಕ್ಷಿಸಿ: ಲೋಕ ಸಮರಕ್ಕೆ ಕಾಂಗ್ರೆಸ್ ಸಜ್ಜು: ಸಮಿತಿಗಳ ಮೂಲಕ 28 ಲೋಕಸಭಾ ಕ್ಷೇತ್ರಗಳ ಸರ್ವೆ