ಎಚ್‌ಡಿಕೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದೆ. ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಜೊತೆ ಹೋಗಲು ಜೆಡಿಎಸ್ ಸಿದ್ಧವಾಗಿದೆ.
ಬೆಂಗಳೂರು (ಸೆ. 07): ಎಚ್‌ಡಿಕೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದೆ. ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಜೊತೆ ಹೋಗಲು ಜೆಡಿಎಸ್ ಸಿದ್ಧವಾಗಿದೆ.
'ನೀವು ನಮಗೆ ಸಹಕಾರ ಕೊಡಿ. ನಿಮ್ಮ ಬೇಡಿಕೆಗಳನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಎತ್ತಿನಹೊಳೆ, ಮಹಾದಾಯಿ ಹಾಗೂ ಮೇಕೆದಾಟು ವಿಚಾರಗಳ ಬಗ್ಗೆಯೂ ಪ್ರಸ್ತಾಪವಾಗಿದೆ. ಕೋರ್ಟ್ ಆದೇಶ ನೋಡಿಕೊಂಡು ಮೇಕೆದಾಟು ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ. ಇದೇ ವೇಳೆ ಬಹಳ ಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಶಾಸಕರ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ.