ಕಲಬುರ್ಗಿ: ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

Sep 14, 2021, 11:30 AM IST

ಬೆಂಗಳೂರು (ಸೆ. 14): ಅತಂತ್ರ ಫಲಿತಾಂಶ ಬಂದಿರುವ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ನಿರ್ಣಾಯಕ ಪಕ್ಷವಾಗಿ ಹೊರಹೊಮ್ಮಿರುವ ಜೆಡಿಎಸ್‌ ರಾಜ್ಯ ಕಾಂಗ್ರೆಸ್‌ ನಾಯಕರ ನಡೆಯನ್ನು ನೋಡಿಕೊಂಡು ಮುಂದಿನ ನಿರ್ಣಯ ಕೈಗೊಳ್ಳುವ ಚಿಂತನೆಯಲ್ಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈತ್ರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನ ರಾಜ್ಯ ನಾಯಕರು ಈವರೆಗೂ ಮುಂದಾಗಿಲ್ಲ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮೈತ್ರಿ ವಿಚಾರದಲ್ಲಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ ಅಥವಾ ಬಿಜೆಪಿಗೆ ಬೆಂಬಲ ನೀಡಬೇಕೇ ಎಂಬ ಗೊಂದಲದಲ್ಲಿ ಜೆಡಿಎಸ್‌ ಇದೆ.