Sep 13, 2021, 10:21 AM IST
ಬೆಂಗಳೂರು (ಸೆ. 13): ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಇತರ ಮುಖಂಡರ ಜೊತೆ ಚರ್ಚಿಸಿ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಕಲಬುರಗಿ ಪಾಲಿಕೆ ಮೈತ್ರಿ ಕಗ್ಗಂಟು: ಜೆಡಿಎಸ್‌ಗೆ ಹೊಸ ಭರವಸೆ ನೀಡಿದ ಬಿಜೆಪಿ ಶಾಸಕ
ಮೇಯರ್ ಸ್ಥಾನಕ್ಕಾಗಿ ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಎಚ್‌ಡಿಕೆಯನ್ನು ಭೇಟಿಯಾಗಿ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಜೆಡಿಎಸ್ ಮುಖಂಡರನ್ನು ಭೇಟಿಯಾಗಿಲ್ಲ. ಸಿದ್ದರಾಮಯ್ಯ, ಡಿಕೆಶಿ ಬಂದು ಕೇಳಿದರೆ ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದೆ ಜೆಡಿಎಸ್. ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.