ಜನತಾ ಕರ್ಫ್ಯೂದಿನದಂದು ಔಷಧಿ ಸಿಂಪಡಿಸಲಾಗುತ್ತಿದೆ ಎನ್ನವ ಸುಳ್ಳು ಸುದ್ದಿ ಸಾಕಷ್ಟು ವೈರಲ್ ಆಗಿತ್ತಿದೆ. ಈ ಕುರಿತಂತೆ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಇದೊಂದು ಸುಳ್ಳು ಸುದ್ದಿ, ಈ ಕುರಿತಂತೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.
ಬೆಂಗಳೂರು(ಮಾ.22): ಜನತಾ ಕರ್ಫ್ಯೂ ದಿನದಂದು ಔಷಧಿ ಸಿಂಪಡಿಸಲಾಗುತ್ತಿದೆ ಎನ್ನವ ಸುಳ್ಳು ಸುದ್ದಿ ಸಾಕಷ್ಟು ವೈರಲ್ ಆಗಿತ್ತಿದೆ. ಈ ಕುರಿತಂತೆ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಇದೊಂದು ಸುಳ್ಳು ಸುದ್ದಿ, ಈ ಕುರಿತಂತೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.
ಈ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಾಗಲಿ, ಜವಬ್ದಾರಿಯುತ ಹುದ್ದೆಯಲ್ಲಿರುವ ವ್ಯಕ್ತಿಗಳಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ.
ಇನ್ನು ವಿಕ್ಟೋರಿಯಾ ಆಸ್ಫತ್ರೆನ್ನು ಸಂಪೂರ್ಣ ಕೋವಿಡ್ 19 ಚಿಕಿತ್ಸೆಗಾಗಿಯೇ ಮೀಸಲಿಟ್ಟಿರುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಶಂಕಿತ ಕೊರೋನಾ ವ್ಯಕ್ತಿಗಳನ್ನು ಪತ್ತೆಹಚ್ಚಿ, ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ.