- ನನ್ನ ಬಗ್ಗೆ ಹಲವಾರು ಅನುಮಾನಗಳಿವೆ. ನನ್ನ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ
- ಟೀಕೆಗಳು ನನಗೆ ಆಶೀರ್ವಾದವಿದ್ದಂತೆ
- ಟೀಕೆಗಳನ್ನು ಮೆಟ್ಟಿಲಾಗಿಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ: ಸಿಎಂ ಬೊಮ್ಮಾಯಿ
ಬೆಂಗಳೂರು (ಆ. 15): 'ನನ್ನ ಬಗ್ಗೆ ಹಲವಾರು ಅನುಮಾನಗಳಿವೆ. ನನ್ನ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ. ಅವೆಲ್ಲವೂ ಕೂಡಾ ನನಗೆ ಆಶೀರ್ವಾದ. ಅನುಮಾನಗಳನ್ನು ಸ್ಫೂರ್ತಿಯಾಗಿ ತೆಗೆದುಕೊಂಡು, ಅವುಗಳನ್ನೇ ಮೆಟ್ಟಿಲಾಗಿಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ. ಅದಕ್ಕೆ ಬೇಕಾದ ಆತ್ಮವಿಶ್ವಾಸವನ್ನು ಹೊಂದಿದ್ದೇನೆ' ಎಂದು ಸಿಎಂ ಬೊಮ್ಮಾಯಿ ಸ್ವಾತಂತ್ರೋತ್ಸವದ ಭಾಷಣದಲ್ಲಿ ಹೇಳಿದ್ದಾರೆ.