ಬೆಂಗಳೂರು (ಅ.25) ತಿಹಾರ್ ಜೈಲಿನಿಂದ ಮೊನ್ನೆಯಷ್ಟೇ ಬಿಡುಯಾಗಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ಗೆ ಪಕ್ಷವು ದೊಡ್ಡ ಜವಾಬ್ದಾರಿ ನೀಡಲು ಮುಂದಾಗಿದೆ. ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರವನ್ನು ಹೆಣೆದಿದ್ದು, ಡಿಕೆಶಿಗಾಗಿ ಬೃಹತ್ ರಾಜಕೀಯ ವೇದಿಕೆಯನ್ನು ಸಿದ್ಧಪಡಿಸಿದೆ ಎನ್ನಲಾಗಿದೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಡಿಕೆಶಿಯನ್ನು ಕಳೆದ ತಿಂಗಳು ಬಂಧಿಸಿದ್ದರು. ಕಳೆದ ಬುಧವಾರ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿತ್ತು. ಅಕ್ಟೋಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: