'ಕೋವಿಡ್‌ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ'; ಬಿಎಸ್‌ವೈ

Aug 25, 2020, 5:16 PM IST

ಬೆಂಗಳೂರು (ಆ. 25): ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಬೆಳಗಾವಿ, ಧಾರವಾಡ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ವೈಮಾನಿಕ ಸಮೀಕ್ಷೆ ಬಳಿಕ ಬೆಂಗಳೂರಿನಲ್ಲಿಯೂ ಚರ್ಚಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

'ಕೋವಿಡ್‌ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಬೆಳೆ ಪರಿಹಾರದ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮತ್ತೊಮ್ಮೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ' ಎಂದು ಸಿಎಂ ಹೇಳಿದ್ದಾರೆ. 

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ; ಸಿಎಂಗೆ ಸಂತ್ರಸ್ತರಿಂದ ಪ್ರತಿಭಟನೆಯ ಬಿಸಿ