Mar 6, 2022, 6:50 PM IST
ಶಿವಮೊಗ್ಗ, (ಮಾ.06): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಲ್ಲಿ ಇಂದು(ಭಾನುವಾರ) ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಕೆಳದಿ ಶಿವಪ್ಪನಾಯಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಶಿಕಾರಿಪುರ ಜನರ ಋಣದ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಬೆಂಕಿಯ ಚೆಂಡು ಎಂದ ಈಶ್ವರಪ್ಪ
ಈ ಸಂದರ್ಭದಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ . ಮಾಜಿ ಸಚಿವ ಹಾಗು ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಸಂಸದರಾದ ಬಿ.ವೈ ರಾಘವೇಂದ್ರ ಸಾಹಿತಿಗಳಾದ ಗೊ.ರು ಚೆನ್ನಬಸಪ್ಪ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.