Feb 19, 2024, 11:51 PM IST
ಶಾಲೆಗಳಲಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಅನ್ನೋ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಡಿಯಲ್ಲಿ ಬರುವ ಹಲವು ಶಾಲೆಗಳನ್ನು ಈ ವಾಕ್ಯ ಬದಲಾಗಿದೆ. ಐಎಎಸ್ ಅಧಿಕಾರಿ ವ್ಯಾಟ್ಸ್ಆ್ಯಪ್ ಮೂಲಕ ನೀಡಿದ ಈ ಆದೇಶ ಸದನದಲ್ಲಿ ಭಾರಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಈ ಬದಲಾವಣೆಯನ್ನು ಸಮರ್ಥಿಸಿಕೊಂಡಿದೆ. ಪ್ರಬುದ್ಧ ಸಮಾಜ ನಿರ್ಮಾಣ ಮಾಡಲು ಪ್ರಶ್ನಿಸುವುದು ಅಗತ್ಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಮೂಲಕ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂಬ ಘೋಷವಾಕ್ಯ ಬದಲಾವಣೆಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿದ್ದಾರೆ.