ಜೂನ್ 30ರ ವರೆಗೆ ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ; ಸಚಿವರ ಸಭೆ ಬಳಿಕ ಅಂತಿಮ ನಿರ್ಧಾರ!

May 29, 2021, 3:15 PM IST

ಬೆಂಗಳೂರು(ಮೇ.29): ಕೊರೋನಾ ವೈರಸ್ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಲಾಕ್‌ಡೌನ್ ಹೇರಲಾಗಿದೆ. ಜೂನ್ 7ರ ವರೆಗಿರುವ ಲಾಕ್‌ಡೌನ್ ಇದೀಗ ಜೂನ್ 30ರ ವರೆಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಕೇಂದ್ರ ಗೃಹ ಇಲಾಖೆ ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಇದರ ಪ್ರಕಾರ ಸಚಿವರ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.