ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

Published : Feb 22, 2022, 11:45 AM IST

 ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 
 

 ಬೆಂಗಳೂರು (ಫೆ. 22): ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಪ್ರಶ್ನೆಗೆ ಉತ್ತರಿಸಿದ ಅವರು, ಕುರಿ, ಮೇಕೆಗಳು ಮೃತಪಟ್ಟಾಗ ಪ್ರಸ್ತುತ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರ ಮೊತ್ತವು ಸಾಕಾಗುವುದಿಲ್ಲ ಎಂಬುದು ಸದಸ್ಯರ ಒತ್ತಾಯವಾಗಿದೆ. ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಅಲ್ಲದೇ, ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಶೆಂಪೂರ, ಸದ್ಯಕ್ಕೆ ಮರಿ ಕುರಿ, ಮೇಕೆಗಳು ಸಾವನ್ನಪ್ಪಿದರೆ ಎರಡೂವರೆ ಸಾವಿರ ರು., ದೊಡ್ಡ ಕುರಿ, ಮೇಕೆ ಸಾವನ್ನಪ್ಪಿದರೆ ಐದು ಸಾವಿರ ರು. ಪರಿಹಾರವನ್ನು ಸಾಕಾಣಿಕೆದಾರರಿಗೆ ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಪರಿಹಾರ ಮೊತ್ತವನ್ನು 10 ಸಾವಿರ ರು.ಗೆ ಹೆಚ್ಚಿಸಬೇಕು. ಅಲ್ಲದೇ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಸಾಕಾಣಿಕೆಗೆ ಒದಗಿಸುತ್ತಿರುವ ಸಹಾಯಧನದ ಮೊತ್ತವನ್ನು 75 ಸಾವಿರ ರು.ಗೆ ಹೆಚ್ಚಿಸಬೇಕು. ಗಡಿಭಾಗದಲ್ಲಿನ ತೆಲಂಗಾಣದಲ್ಲಿ ಕುರಿ, ಮೇಕೆ ಸಾಕಾಣಿಗೆ ಶೇ.90ರಷ್ಟುಸಬ್ಸಿಡಿ ನಿಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more