Feb 4, 2022, 3:29 PM IST
ಬೆಂಗಳೂರು (ಫೆ. 04): ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣ (Hijab Case) ಈಗ ಹೈಕೋರ್ಟ್ (Highcourt) ಮೆಟ್ಟಿಲೇರಿದೆ. ತನಗೆ ತರಗತಿಯಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ನೀಡುವಂತೆ ಉಡುಪಿಯ ವಿದ್ಯಾರ್ಥಿನಿ ರೇಶಮ್ ಫಾರೂಕ್ ಹೈಕೋರ್ಟಿಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.
Hijab Row: ಕರಾವಳಿಯಿಂದ ಕುಂದಾನಗರಿಗೆ, ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು
ವಿದ್ಯಾರ್ಥಿನಿಯರಾದ ಆಯೇಷಾ ಹಜೀರಾ ಅಲ್ಮಾಸ್, ರೇಶಮ್ ಫಾರೂಕ್, ಅಲಿಯಾ ಅಸ್ಸಾದಿ, ಶಫಾ, ಶಮೀಮ್, ಮುಸ್ಕಾನ್ ಜೈನಬ್ ಅವರನ್ನು ಅವರ ತಾಯಂದಿರು ಪ್ರತಿನಿಧಿಸಿದ್ದು, ವಕೀಲ ಮೊಹಮ್ಮದ್ ತಾಹೀರ್ ಅವರ ಮೂಲಕ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಮನವಿಯಲ್ಲಿ ಪ್ರತಿವಾದಿಗಳಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿದೆ. ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಲಾಗಿದೆ.