Feb 22, 2022, 4:59 PM IST
ಬೆಂಗಳೂರು (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಪೊಲೀಸರು ಮೂವರನ್ನು ಬಂಧಿಸಿದ್ದು, 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಇಬ್ಬರನ್ನು ಶಿವಮೊಗ್ಗ ಬುದ್ಧನಗರದ ಕಾಸೀಫ್ (30), ಜೆ.ಪಿ.ನಗರದ ಸಯ್ಯದ್ ನದೀಂ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಮಾಹಿತಿ ಬಹಿರಂಗವಾಗಿಲ್ಲ. ಇನ್ನೂ ಕೆಲವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
Shivamogga: ಹರ್ಷನ ಹತ್ಯೆಗೆ ಕಾರಣವೇನು..? ಸಹೋದರಿ ಹೀಗೆ ಹೇಳುತ್ತಾರೆ
ಹತ್ಯೆ ನಡೆಯುತ್ತಿದ್ದಂತೆ ಶಿವಮೊಗ್ಗ ಎಸ್ಪಿ ನೇತೃತ್ವದಲ್ಲಿ ಆರು ತಂಡವನ್ನು ರಚಿಸಲಾಗಿತ್ತು. ತಕ್ಷಣವೇ ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಗಳ ಮೊಬೈಲ್ ಕರೆಗಳು ಮತ್ತು ಓಡಾಟದ ಜಾಡು ಹಿಡಿದು ಸದ್ಯಕ್ಕೆ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ಬೂದಿ ಮುಚ್ಚಿದ ಕೆಂಡದಂಥ ಪರಿಸ್ಥಿತಿ ಇದ್ದು ರಾರಯಪಿಡ್ ಆ್ಯಕ್ಷನ್ ಫೋರ್ಸ್‌ನ ಒಂದು ತುಕಡಿ, ಕೆಎಸ್‌ಆರ್‌ಪಿಯ ತುಕಡಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.