ಇಂದು ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ ಮಹಾನಗರ ಪಾಲಿಕೆಗೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.
ಬೆಂಗಳೂರು (ಸೆ. 03): ಇಂದು ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ ಮಹಾನಗರ ಪಾಲಿಕೆಗೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.
ಇನ್ನು ಭಾಷೆ, ಗಡಿ, ಗುಂಪುಗಾರಿಕೆ ಹೆಸರಿನಲ್ಲಿ ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಒಟ್ಟು 58 ವಾರ್ಡ್‌ಗಳಲ್ಲಿ 30 ಸ್ಥಾನ ಗೆದ್ದವರು ಗದ್ದುಗೆ ಏರಲಿದ್ದಾರೆ. ಬಿಜೆಪಿ 55, ಕಾಂಗ್ರೆಸ್ 45, ಜೆಡಿಎಸ್ 11 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.