Jul 15, 2024, 11:18 PM IST
ಪೆಟ್ರೋಲ್ ದರ, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಬಸ್ ದರ ಏರಿಕೆಗೆ ಕಸರತ್ತು ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡಿರುವ ನಾಯಕರು ಸೂಚಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಬಸ್ ದರ ಏರಿಕೆ ಕುರಿತು ಚಿಂತನೆ ನಡೆದಿದೆ ಅನ್ನೋ ಮಾತನ್ನು ವಾಯುವ್ಯ ಸಾರಿಗೆ ನಿಗಮ ಅಧ್ಯಕ್ಷ ರಾಜು ಖಾಗೆ ಹೇಳಿದ್ದಾರೆ. ಇತ್ತ ಬೋರ್ಡ್ ಮೀಟಿಂಗ್‌ನಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ಆದರೆ ಈ ಮಾತನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯನ್ನು ಅಲ್ಲಗೆಳೆದಿದ್ದಾರೆ.