ಸಂಸತ್ತಿನಲ್ಲಿ ಗಡಿ ಗದ್ದಲ, ಕರ್ನಾಟಕ-ಮಹಾರಾಷ್ಟ್ರ ಸಂಸದರ ವಾಗ್ವಾದ!

ಸಂಸತ್ತಿನಲ್ಲಿ ಗಡಿ ಗದ್ದಲ, ಕರ್ನಾಟಕ-ಮಹಾರಾಷ್ಟ್ರ ಸಂಸದರ ವಾಗ್ವಾದ!

Published : Dec 07, 2022, 09:31 PM IST

ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಸತ್ತಿನಲ್ಲೂ ಸದ್ದು ಮಾಡಿದೆ. ಎನ್‌ಸಿಪಿಯ ಸುಪ್ರಿಯಾ ಸುಳೆ ಬುಧವಾರ ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದ ಬೆನ್ನಲ್ಲಿಯೇ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಸದರ ನಡುವೆ ವಾಗ್ವಾದಕ್ಕೆ ಸಾಕ್ಷಿಯಾಗಿದೆ.

ನವದೆಹಲಿ (ಡಿ.7): ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಬುಧವಾರ ಸಂಸತ್ತಿನಲ್ಲಿ ವಿವಾದವನ್ನು ಪ್ರಸ್ತಾಪಿಸಿದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಸುಳೆ, ಅವರು ಮಹಾರಾಷ್ಟ್ರವನ್ನು ಒಡೆಯಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದ ಬೆಂಬಲವಿಲ್ಲದೆ ಕರ್ನಾಟಕದ ಹಿರೇಬಾಗೇವಾಡಿಯಲ್ಲಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಯಲು ಸಾಧ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಬುಧವಾರ ಹೇಳಿದ್ದಾರೆ. ಮಂಗಳವಾರ ಮಧ್ಯಾಹ್ನ ಬೆಳಗಾವಿ ಸಮೀಪದ ಕರ್ನಾಟಕದ ಹಿರೇಬಾಗೇವಾಡಿ ಪ್ರದೇಶದಲ್ಲಿ ಮಹಾರಾಷ್ಟ್ರದ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಸಲಾಗಿದ್ದು, ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಮಂಗಳವಾರ ಬೀದಿಗಿಳಿದಿದ್ದರಿಂದ ಹಲವರನ್ನು ವಶಕ್ಕೆ ಪಡೆಯಲಾಗಿದೆ.

ಕರ್ನಾಟಕ ಸೇರುತ್ತೇವೆಂದ ಗ್ರಾಮಸ್ಥರಿಗೆ ಮಹಾರಾಷ್ಟ್ರ ಪೊಲೀಸರಿಂದ ನೋಟಿಸ್‌

ಸುಪ್ರಿಯಾ ಸುಳೆ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್‌ ಉದಾಸಿ, ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಮಹಾರಾಷ್ಟ್ರ ನಾಯಕರು ರಾಜಕೀಯಕ್ಕೆ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more