ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ.
ಬೆಂಗಳೂರು (ಡಿ. 25): ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, 2023ರ ಚುನಾವಣೆವರೆಗೂ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಎಂದಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಪೋಲ ಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟು ಹಾಕಲು ಮುಖ್ಯಮಂತ್ರಿ ಬದಲಾವಣೆ ಸುದ್ದಿ ಹರಡಿಸುತ್ತಿದ್ದಾರೆ. ಕಾಂಗ್ರೆಸ್‌ನವರೇ ಈ ಸುದ್ದಿ ಹುಟ್ಟು ಹಾಕಿರಬಹುದು ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) 2023ರ ಚುನಾವಣೆ ವರೆಗೂ ಬೊಮ್ಮಾಯಿ ಅವರೇ ಸಿಎಂ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಒಟ್ಟಾಗಿ ಎದುರಿಸಲಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ. ಖುದ್ದು ಗೃಹ ಸಚಿವ ಅಮಿತ್ ಶಾ ಅವರೇ ಬಹಿರಂಗ ವೇದಿಕೆಯಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.