Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Published : Jan 03, 2022, 10:17 AM IST

ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 ಬೆಂಗಳೂರು (ಜ. 03):  ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟುಅಪಾಯಕಾರಿ ಮಟ್ಟಕ್ಕೆ ತಲುಪುವುದನ್ನು ತಡೆಯಲು ಸಮಿತಿ ಅನೇಕ ಕ್ರಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಉಳಿದಂತೆ ಅನೇಕ ಹಂತಗಳಲ್ಲಿ ವಿವಿಧ ನಿರ್ಬಂಧ ಹೇರುವಂತೆಯೂ ಸಲಹೆ ನೀಡಲಾಗಿದೆ. ಪಾಸಿಟಿವಿಟಿ ದರಕ್ಕೆ ಅನುಗುಣವಾಗಿ ಕಡಿಮೆ ನಿರ್ಬಂಧ (ಹಳದಿ ಬಣ್ಣ ), ಮಧ್ಯಮ ನಿರ್ಬಂಧ (ಕಿತ್ತಳೆ) ಮತ್ತು ಕಠಿಣ ನಿರ್ಬಂಧ (ಕೆಂಪು) ಇರುವ ಕಟ್ಟುಪಾಡುಗಳನ್ನು ವಿಧಿಸುವಂತೆ ಹೇಳಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದ್ದರೆ ಹಳದಿ, ಶೇ.1ರಿಂದ ಶೇ.2ರಷ್ಟಿದ್ದರೆ ಕಿತ್ತಳೆ ಮತ್ತು ಶೇ.2 ದಾಟಿದರೆ ಕೆಂಪು ಎಚ್ಚರಿಕೆ ನೀಡಿ ನಿರ್ಬಂಧ ವಿಧಿಸುವಂತೆ ಸಲಹೆ ನೀಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!