ಸರ್ಕಾರದ ವಿರುದ್ಧ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರು ಹೋರಾಟಕ್ಕೆ ಮುಂದಾಗಿದ್ದಾರೆ. ಭರವಸೆಗಳನ್ನು ಈಡೇರಿಸುವುದಾಗಿ ಮಾತು ಕೊಟ್ಟು 2 ತಿಂಗಳಾದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಹಾಗಾಗಿ ಬಿಎಂಟಿಸಿ ಕಚೇರಿ ಎದುರು ನಾಳೆ ಸಾರಿಗೆ ಸಿಬ್ಬಂದಿ ಧರಣಿ ಕೂರಲಿದ್ದಾರೆ.
ಬೆಂಗಳೂರು (ಫೆ. 09): ಸರ್ಕಾರದ ವಿರುದ್ಧ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರು ಹೋರಾಟಕ್ಕೆ ಮುಂದಾಗಿದ್ದಾರೆ. ಭರವಸೆಗಳನ್ನು ಈಡೇರಿಸುವುದಾಗಿ ಮಾತು ಕೊಟ್ಟು 2 ತಿಂಗಳಾದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಹಾಗಾಗಿ ಬಿಎಂಟಿಸಿ ಕಚೇರಿ ಎದುರು ನಾಳೆ ಸಾರಿಗೆ ಸಿಬ್ಬಂದಿ ಧರಣಿ ಕೂರಲಿದ್ದಾರೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇನ್ನೊಂದು ಕಡೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್‌ಗಳು ಕಾರ್ಯಾಚರಣೆ ನಡೆಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.