ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಬಿಸಿಲಿನ ಝಳ ಏರುತ್ತಲೇ ಇದ್ದು, ಇದರ ನಡುವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು ಅರ್ಧಗಂಟೆಯಿಂದ ಒಂದು ಗಂಟೆಗಳ ಕಾಲ ಉತ್ತಮ ಮಳೆ ಸುರಿದಿದೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಬಿಸಿಲಿನ ಝಳ ಏರುತ್ತಲೇ ಇದ್ದು, ಇದರ ನಡುವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು ಅರ್ಧಗಂಟೆಯಿಂದ ಒಂದು ಗಂಟೆಗಳ ಕಾಲ ಉತ್ತಮ ಮಳೆ ಸುರಿದಿದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.