Jun 6, 2022, 10:19 PM IST
ಬೆಂಗಳೂರು (ಜೂ. 06): ಉತ್ತರ ಭಾರತದಲ್ಲಿ ಮತ್ತೆ ಉಷ್ಣ ಅಳೆ ಆರಂಭವಾಗಿದ್ದರೇ ದಕ್ಷಿಣ ಭಾರತದಲ್ಲಿ ಮಾತ್ರ ವರುಣನ ಅಬ್ಬರ ಶುರುವಾಗಿದೆ. ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಸತತ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡಿದ್ದಾರೆ.
ಇದನ್ನೂ ಓದಿ: ಬೆಂಗ್ಳೂರಲ್ಲಿ ನಿಲ್ಲದ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಕೇರಳ, ಮಾಹೆ ಹಾಗೂ ಲಕ್ಷದ್ವೀಪದಲ್ಲಿ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗಲಿದೆ. ಆಲ್ಲದೇ ಉತ್ತರ ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ನಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.